ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಜುಲೈ 19, 2009 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ
ಕಲ್ಲೂರಿ ಎಂಬ ಸಿನಿಮಾ ನೋಡಿದ್ದೀರಾ...? ಪ್ರಶಾಂತ್ ಹುಲ್ಕೋಡು ಸಿನಿಮಾ ಹೇಗಿರಬೇಕು ಎಂದು ನಿರ್ದಿಷ್ಟವಾಗಿ ಹೇಳುವದು ಕಷ್ಟ. ಆದರೆ ಒಳ್ಳೆಯ ಸಿನಿಮಾ ನೋಡುಗನ್ನು ತನ್ನಲ್ಲಿ ಒಂದು ಪಾತ್ರವಾಗಿಸುತ್ತದೆ ಅನ್ನುತ್ತಾರೆ. ಹಾಗಾಗಿಯೆ ಬಾಲಿವುಡ್ ಮಂದಿ ರಿಯಲ್ ಸ್ಟೋರಿಗಳನ್ನು ರೀಲ್‌ನಲ್ಲಿ ತರಲು ಹೆಚ್ಚು ಶ್ರಮವಹಿಸುತ್ತಾರೆ. ಬಾಲಿವುಡ್‌ನಲ್ಲಿಯೂ ಆಂತಹ ಪ್ರಯೋಗಗಳಾಗುತ್ತಿವೆ. ಬದುಕಿಗೆ ಹತ್ತಿರವೆನಿಸುವ ಕತೆಗಳನ್ನು ತೆರೆಗೆ ಅಳವಡಿಸುವುದು ಸುಲಭದ ಕೆಲಸವಲ್ಲ. ಅದಕ್ಕೆ ತನ್ನದೆ ಆದ ಕಮಿಟ್‌ಮೆಂಟ್, ಡೆಡಿಕೇಶನ್ ಇರಬೇಕಾಗುತ್ತದೆ. ಚಿತ್ರದ ನಿರ್ದೇಶಕನಿಗೆ ಅಂತಹ ಸಂವೇದನೆ ಇರದಿದ್ದರೆ ಇಡೀ ಚಿತ್ರ ಹಾಳಾಗಿಬಿಡುತ್ತದೆ. ಈ ಮಾತಿಗೆ ವಿರುದ್ಧವಾಗಿ ಇತ್ತೀಚೆಗೆ ಬಂದ ತಮಿಳಿನ ಕಲ್ಲೂರಿ ಉತ್ತಮ ಉದಾಹರಣೆ. ಈ ಚಿತ್ರದ ಕುರಿತು ಹೇಳುವ ಮುನ್ನ ನಿಮಗೆ ಇದನ್ನು ತೆರೆಗೆ ತಂದ ನಿರ್ದೇಶಕನ ಶ್ರಮದ ಕುರಿತು ಹೇಳಬೇಕು. ಅದು ಕಲ್ಲೂರಿಗಿಂತ ಲೂ ಇಂಟೆರಿಸ್ಟಿಂಗ್. ತಮಿಳಿನ ಪ್ರಸಿದ್ಧ ಚಿತ್ರ ಕಾದಲ್ ನೆನಪಿರಬೇಕು ನಿಮಗೆ. ಅಂತರಜಾತಿ ಪ್ರೇಮ ಕತೆಯನ್ನು ಅದ್ಭುತವಾಗಿ ನಿರೂಪಿಸಿದ ಚಿತ್ರ. ಅದರ ನಿರ್ದೇಶಕ ಬಾಲಾಜಿ ಶಕ್ತಿವೇಲು ಕಾದಲ್ ನಂತರ ನಿರ್ದೇಶಿಸಿದ ಚಿತ್ರವೇ ಕಲ್ಲೂರಿ. ತಮಿಳಿನಲ್ಲಿ ಕಲ್ಲೂರಿ ಎಂದರೆ ಕಾಲೇಜು ಎಂದರ್ಥ. ಕಾದಲ್ ಸೂಪರ್ ಹಿಟ್ ಆದ ನಂತರ ಬಾಲಾಜಿ ಶಕ್ತಿವೇಲು ಮುಂದೆ ನಿರ್ಮಾಪಕರ ದಂಡೇ ನೆರೆದಿತ್ತಂತೆ. ಆದರೆ ಈ ಮಹಾಶಯ ಯಾವುದನ್ನು ಒಪ್ಪಿಕೊಳ್ಳದೆ ಆರ್ಥಿಕ
ಮಂಗಳೂರು ಡೈರಿ! ಭಾಗ 1 ಜನವಾಹಿನಿಯ ಪಾಳು ಬಿದ್ದ ಬಂಗಲೆಯ ನೆರಳಿನಲ್ಲಿ.... ನಾನು ಎಂಟನೆ ತರಗತಿಯಲ್ಲಿದ್ದಾಗಿನ ನೆನಪು. ತೀರ್ಥಹಳ್ಳಿಯಲ್ಲಿ ನಾನಿದ್ದ ಹಾಸ್ಟೆಲ್ಲಿಗೆ ಜನವಾಹಿನಿ ಪತ್ರಿಕೆ ಬರುತ್ತಿತ್ತು. ಬೆಳಗ್ಗೆ ಆಗುತ್ತಲೆ ಪತ್ರಿಕೆಗಾಗಿ ಪೈಪೋಟಿ ನಡೆಸುತ್ತಿದ್ದೆವು. ಇದಕ್ಕಾಗಿ ಹಲವಾರು ಭಾರಿ ನಮ್ಮಲ್ಲಿ ಗಲಾಟೆಗಳು ಆಗಿದ್ದವು. ಅದೇಕೋ ಆವತ್ತು ಜನವಾಹಿನಿಯೊಂದಿಗೆ ಆರ್ಥವಾಗದ ಸಂದಂಧವೊಂದು ನಮ್ಮಂತ ಚಿಕ್ಕವಯಸ್ಸಿನ ಹುಡುಗರಿಗೆ ಬೆಳೆದಿತ್ತು. ಹಾಗೆಯೆ ಲಂಕೇಶ್ ಪತ್ರಿಕೆ ಕೂಡ ಅದರಲ್ಲಿ ಬರುತ್ತಿದ್ದ ತುಂಟಾಟಕ್ಕಾಗಿ ಓದುತ್ತಿದ್ದೆವು!. ಇವೆಲ್ಲವೂ ಹಳೆಯ ದಿನಗಳು, ಮಾಸಿದ ನೆನಪುಗಳು. ಸಹಜವಾಗಿಯೆ ನಾನು ಸಾಹಿತ್ಯದ ಬಗ್ಗೆ ಬೆಳೆಸಿ ಕೊಂಡಿದ್ದ ಆಸಕ್ತಿ, ನನ್ನಲ್ಲಿ ಹಲವು ಆಲೋಚನೆಗಳನ್ನು ಹುಟ್ಟುಹಾಕಿತು. ಹೊಸ ಪ್ರಪಂಚವೊಂದನ್ನು ಕಂಡ ಆನುಭವ. ಮಲೆನಾಡಿನಲ್ಲಿಯೆ ಹುಟ್ಟಿ ಬೆಳೆದು ಆಲ್ಲಿನ ಪರಿಸರದ ಜೊತೆ ಹೊಂದಿದ ಸಂಬಂಧವೊಂದು ಕಳಚಿಕೊಂಡದ್ದು ಚಳುವಳಿ ಹೋರಾಟ ಅಂತ ಬೀದಿಗೆ ಬಿದ್ದ ಮೇಲೆಯೆ. ಅಲ್ಲಿಯವರೆಗಿದ್ದ ಊರಲ್ಲಿ ಶಿಕಾರಿ ಹುಚ್ಚು, ಕಾಡು ಸುತ್ತುವ ಗೀಳುಗಳು ವೈಚಾರಿಕತೆ ಎಂಬ ಸೋಗಿನಲ್ಲಿ ಪೇವಲವಾಗಿ ಕಂಡಿದ್ದವು. ಜನವಾಹಿನಿ ನಂತರ ಇಷ್ಟವಾಗಿದ್ದು ಆದು ಪ್ರಗತಿಪರ ವಿಚಾರಗಳನ್ನು ಪ್ರತಿಪಾದಿಸುವ ಪತ್ರಿಕೆ ಎಂಬ ಕಾರಣಕ್ಕೆ. ಹಾಗಂತ ನಾನು ನಂಬಿಕೊಂಡಿದ್ದೆ. ಆಷ್ಟರಲ್ಲಾಗಲೆ ಅದು ತನ್ನ ಆಂತರಿಕ ಜಗಳಗಳಿಂದಾಗಿ ಮುಚ್ಚಿಹೋಗುತ್ತು. ಹಾಸ್ಟೆಲ್ಲಿಗೆ ಈ