ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಸೆಪ್ಟೆಂಬರ್ 9, 2009 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ
ನಾಲ್ಕು ಮೂವತ್ತರ ಕಲರವ! ಇದು ಸಂಜೆ ನಾಲ್ಕ ಮೂವತ್ತರ ನಂತರದ ಕಲರವ. ತೀರ್ಥಹಳ್ಳಿಯ ಬಸ್ ನಿಲ್ದಾಣದಲ್ಲಿ ಶಾಲೆ ಬಿಡುತ್ತಿದ್ದಂತೆ ಮಕ್ಕಳು ಸಾಲು ಸಾಲಾಗಿ ತಮ್ಮೂರಿಗೆ ಹೋಗುವ ಬಸ್ಸುಗಳಿಗಾಗಿ ಕಾಯುತ್ತಿರುತ್ತಾರೆ. ಒಂದು ಹತ್ತು ವರ್ಷಗಳ ಹಿಂದೆ ನಾನು ಕೂಡ ಸೇವಾ ಭಾರತಿ ಶಾಲೆಯ ಸಮವಸ್ತ್ರದಲ್ಲಿ ನಮ್ಮೂರಿಗೆ ಹೋಗುವ ಬಸ್ಸಿಗಾಗಿ ಕಾಯುತ್ತಾ ನಿಂತಿರುತ್ತಿದ್ದೆ. ತೀರ್ಥಹಳ್ಳಿಯಲ್ಲಿ ಸೋಮವಾರ ಸಂತೆ. ಅವತ್ತು ಮಾತ್ರ ಬಸ್ಸಿನಲ್ಲಿ ಕಾಲು ಹಾಕಲೂ ಜಾಗವಿರುವುದಿಲ್ಲ. ಸಂತೆ ಮಾಡಿ ಬಂದವರ ತರಕಾರಿ, ಒಣಮೀನುಗಳ ವಾಸನೆ ಘಮ ಬಸ್ಸಿನ ತುಂಬಾ ಆವರಿಸಿಕೊಳ್ಳುತ್ತಿತ್ತು. ಇವತ್ತೂ ಕೂಡ ಭಾರದ ಬ್ಯಾಗನ್ನು ಹಾಕಿಕೊಂಡ ಅನಾಮಿಕ ಪುಟಾಣಿಗಳು ಅದೇ ಕಂಪನ್ನು ಸವಿಯುತ್ತಿದ್ದಾರೆ. ಅವತ್ತು ಒಂದು ರೂಪಾಯಿ ಇದ್ದರೆ ಚಾಕೋಲೆಟ್ ತಿನ್ನುತ್ತಿದ್ದಾಗ ಇದ್ದ ಸಮಾಧಾನ ಇವತ್ತು ಕಾಫಿ ಡೇಯಲ್ಲಿ ಕುಳಿತರು ಸಿಗುವುದಿಲ್ಲ. ನಾನಿಲ್ಲಿ ಹೇಳ ಹೊರಟಿದ್ದು ಅಂತಹ ಪುಟ್ಟು ಮಕ್ಕಳು ತಮ್ಮ ವಿದ್ಯಾಭ್ಯಾಸಕ್ಕಾಗಿ ಚಿಕ್ಕ ವಯಸ್ಸಿನಲ್ಲಿ ತೆರುತ್ತಿರುವ ಬೆಲೆಯ ಕುರಿತು. ತೀರ್ಥಹಳ್ಳಿಯ ಆರ್ಥಿಕ ಪರಿಸ್ಥಿತಿಗೋ ಅಥವಾ ಅಲ್ಲಿನ ಅಡಿಕೆ ಬೆಳೆಗಿರುವ ಬೆಲೆಗೊ ಸಾಮಾನ್ಯರೂ ಕೂಡ ತಮ್ಮ ಮಕ್ಕಳನ್ನು ಇಂಗ್ಲಿಷ್ ಶಾಲೆಗೆ ಕಳುಹಿಸುತ್ತಾರೆ. ಗಲ್ಲಿಗೊಂದರಂತೆ ಪೇಯಿಂಗ್ ಗೆಸ್ಟ್‌ಗಳಿವೆ. ಸ್ವಲ್ಪ ಹಣವಂತರು ತಮ್ಮ ಮಕ್ಕಳನ್ನು ಅಂತಹ ಪೇಯಿಂಗ್ ಗೆಸ್ಟ್‌ಗಳಲ್ಲಿ ಬಿಡುತ್ತಾರೆ. ನಾನು ೮ನೆ ತರಗತಿಯಲ್ಲಿರುವಾಗ ಎರಡೂವರ