ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಮಾರ್ಚ್ 25, 2012 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

'ಕನಸಿನ ಎಡಿಟರ್'!

ಯುವ ಪತ್ರಕರ್ತನ 'ಕನಸಿನ ಎಡಿಟರ್' ಒಂದು ಸುಳಿವನ್ನೂ ಕೊಡದೆ ಕಣ್ಮರೆಯಾಗಿದ್ದಾರೆ! ಇ. ರಾಘವನ್ ಕೈಗೆ ಆಯುಧ ಕೊಟ್ಟು, ರಣ ಬಿಸಿಲಿನ ಮೈದಾನದ ನಡುವೆ, ಶತ್ರುವನ್ನು ಗುರಿಇಟ್ಟು ತೋರಿಸಿ, ಮರೆಯಲ್ಲಿ ನಿಂತು ಮುಗುಳ್ನುಗುತ್ತಿದ್ದ ಭಾವ ಹಠಾತ್ ಗೊಂದಲಕ್ಕೀಡಾಗಿದೆ. ಒಂದು ವರ್ಷಕ್ಕೂ ಕಡಿಮೆ ಅವಧಿಯ ಒಡನಾಟವನ್ನು ಈ ಹೊತ್ತಿಗೆ ವಿವರಿಸಲು ಪದಗಳು ಸಿಗುತ್ತಿಲ್ಲ. ತೊಟ್ಟು ಕಟ್ಟಿಸಿಕೊಂಡು, ಸುವಾಸನೆ ಬೀರುವ ಮಾಲೆ ರೂಪಹೊಂದಿ, ಮಾರುಕಟ್ಟೆಯ ಬಿಸಿಲಿನಲ್ಲಿ ನೀರು ಚಿಮುಕಿಸಿಕೊಂಡು, ಗಿರಾಕಿಯ ಆಗಮನಕ್ಕಾಗಿ ಕಾಯುತ್ತಿದ್ದ "ಅಕ್ಷರ"ಗಳನ್ನೂ ಗೌರವದಿಂದಲೇ ನೋಡಿಕೊಳ್ಳುತ್ತಿದ್ದ ಸಂಪಾದಕರೊಬ್ಬರ ಕುರಿತು ಮಾತುಗಳಿವು. ಇಷ್ಟೆಲ್ಲಾ ಇಲ್ಯಾಕೆ ಹೇಳಬೇಕಾಗಿದೆ ಎಂದರೆ ನಿನ್ನೆ(ಶನಿವಾರ) ನಂ.1 ಕನ್ನಡ ಪತ್ರಿಕೆಯ ಸಂಪಾದಕ ಎತಿರಾಜನ್ ರಾಘವನ್ ನಮ್ಮನ್ನಗಲಿದ್ದಾರೆ. ಅವರ ಕೆಳಗೆ ಕೆಲಸ ಮಾಡಿದ ಅನುಭವ ಇದೇ ಮೇ.18ಕ್ಕೆ ಒಂದು ವರ್ಷ ತುಂಬುತ್ತದೆ, ಅಷ್ಟೆ! ಅವರು ತೀರಿಕೊಂಡರು ಎಂಬ ಸುದ್ದಿ 'ಸ್ಫೋಟ'ವಾಗುವ ಹೊತ್ತಿಗೆ ನಾನು ಕಚೇರಿಯಲ್ಲಿದ್ದೆ. ಕಳೆದ ನೂರ ಎಪ್ಪತ್ತು ಚಿಲ್ಲರೆ ದಿನಗಳ ಹಿಂದೆ ಶುರುವಾದ 'ಯುವ ಗರ್ಜನೆ' ಎಂಬ ಪರಿಕಲ್ಪನೆಗೆ ದೊಡ್ಡ ಮೈಲಿಗಲ್ಲು ಸಿಕ್ಕ ದಿನ ಅದು. ಪ್ರಾದೇಶಿಕ ಭಾಷೆಯ ಪತ್ರಿಕೆಯೊಂದು ಕಾರ್ಪೋರೇಟ್ ಜಗತ್ತಿನ ವೇದಿಯಲ್ಲಿ ನಿಂತು ತಮ್ಮ ನಿಲುವನ್ನು ತಣ್ಣಗೆ ವಿವರಿಸಿದ ಸಮಯ ಕೂಡ. ಅದರ ವರದಿಗಾ