ವಿಷಯಕ್ಕೆ ಹೋಗಿ
ಮಂಗಳೂರು ಡೈರಿ! ಭಾಗ 1

ಜನವಾಹಿನಿಯ ಪಾಳು ಬಿದ್ದ ಬಂಗಲೆಯ ನೆರಳಿನಲ್ಲಿ....

ನಾನು ಎಂಟನೆ ತರಗತಿಯಲ್ಲಿದ್ದಾಗಿನ ನೆನಪು. ತೀರ್ಥಹಳ್ಳಿಯಲ್ಲಿ ನಾನಿದ್ದ ಹಾಸ್ಟೆಲ್ಲಿಗೆ ಜನವಾಹಿನಿ ಪತ್ರಿಕೆ ಬರುತ್ತಿತ್ತು. ಬೆಳಗ್ಗೆ ಆಗುತ್ತಲೆ ಪತ್ರಿಕೆಗಾಗಿ ಪೈಪೋಟಿ ನಡೆಸುತ್ತಿದ್ದೆವು. ಇದಕ್ಕಾಗಿ ಹಲವಾರು ಭಾರಿ ನಮ್ಮಲ್ಲಿ ಗಲಾಟೆಗಳು ಆಗಿದ್ದವು. ಅದೇಕೋ ಆವತ್ತು ಜನವಾಹಿನಿಯೊಂದಿಗೆ ಆರ್ಥವಾಗದ ಸಂದಂಧವೊಂದು ನಮ್ಮಂತ ಚಿಕ್ಕವಯಸ್ಸಿನ ಹುಡುಗರಿಗೆ ಬೆಳೆದಿತ್ತು. ಹಾಗೆಯೆ ಲಂಕೇಶ್ ಪತ್ರಿಕೆ ಕೂಡ ಅದರಲ್ಲಿ ಬರುತ್ತಿದ್ದ ತುಂಟಾಟಕ್ಕಾಗಿ ಓದುತ್ತಿದ್ದೆವು!.

ಇವೆಲ್ಲವೂ ಹಳೆಯ ದಿನಗಳು, ಮಾಸಿದ ನೆನಪುಗಳು. ಸಹಜವಾಗಿಯೆ ನಾನು ಸಾಹಿತ್ಯದ ಬಗ್ಗೆ ಬೆಳೆಸಿಕೊಂಡಿದ್ದ ಆಸಕ್ತಿ, ನನ್ನಲ್ಲಿ ಹಲವು ಆಲೋಚನೆಗಳನ್ನು ಹುಟ್ಟುಹಾಕಿತು. ಹೊಸ ಪ್ರಪಂಚವೊಂದನ್ನು ಕಂಡ ಆನುಭವ. ಮಲೆನಾಡಿನಲ್ಲಿಯೆ ಹುಟ್ಟಿ ಬೆಳೆದು ಆಲ್ಲಿನ ಪರಿಸರದ ಜೊತೆ ಹೊಂದಿದ ಸಂಬಂಧವೊಂದು ಕಳಚಿಕೊಂಡದ್ದು ಚಳುವಳಿ ಹೋರಾಟ ಅಂತ ಬೀದಿಗೆ ಬಿದ್ದ ಮೇಲೆಯೆ.

ಅಲ್ಲಿಯವರೆಗಿದ್ದ ಊರಲ್ಲಿ ಶಿಕಾರಿ ಹುಚ್ಚು, ಕಾಡು ಸುತ್ತುವ ಗೀಳುಗಳು ವೈಚಾರಿಕತೆ ಎಂಬ ಸೋಗಿನಲ್ಲಿ ಪೇವಲವಾಗಿ ಕಂಡಿದ್ದವು.
ಜನವಾಹಿನಿ ನಂತರ ಇಷ್ಟವಾಗಿದ್ದು ಆದು ಪ್ರಗತಿಪರ ವಿಚಾರಗಳನ್ನು ಪ್ರತಿಪಾದಿಸುವ ಪತ್ರಿಕೆ ಎಂಬ ಕಾರಣಕ್ಕೆ. ಹಾಗಂತ ನಾನು ನಂಬಿಕೊಂಡಿದ್ದೆ. ಆಷ್ಟರಲ್ಲಾಗಲೆ ಅದು ತನ್ನ ಆಂತರಿಕ ಜಗಳಗಳಿಂದಾಗಿ ಮುಚ್ಚಿಹೋಗುತ್ತು. ಹಾಸ್ಟೆಲ್ಲಿಗೆ ಈಗ ಬೇರೆ ಪತ್ರಿಕೆ ಬರುತ್ತಿದೆ. ಈಗಿರುವವರು ಪತ್ರಿಕೆಗಾಗು ಮುಗಿಬೀಳುವ ಮನಸ್ಥಿತಿಯಲ್ಲಿ ಇಲ್ಲ ಎಂಬು ಒಂದು ಅಚ್ಚರಿ.

ಮಂಗಳೂರಿಗೆ ಬಂದು 4 ದಿನಗಳಿಗೆ ಇಂದು ಸ್ನೇಹಿತರ ಜೊತೆ ಬೆಳಗ್ಗಿನ ತಿಂಡಿ ಮುಗಿಸಿ ಇಂಡಸ್ಟ್ರಿಯಲ್ ಎರಿಯಾದ ದಾರಿಗುಂಟ ಹೋಗಿಬಂದೆ. ಮಧ್ಯದಲ್ಲಿ ಇದೇ ಜನವಾಹಿನಿ ಕಚೇರಿ ಎಂದು ಪಾಳು ಬಿದ್ದಿದ್ದ ಬಂಗಲೆ ತೋರಿಸಿದರು ಗೆಳೆಯರು. ನನಗೆ ಬಾಲ್ಯದ ಗೆಳೆಯರೊಬ್ಬರನ್ನು ನೋಡಿದಷ್ಟು ಖುಷಿಯಾಯಿತು. ಜೊತೆಗೆ ಒಂದುರೀತಿಯ ಬೇಜಾರು ಆಯಿತು. ಇವತ್ತು ಜನವಾಹಿನಿ ಇದ್ದಿದ್ದರೆ ಮಾರುಕಟ್ಟೆಯ ಅಗತ್ಯಕ್ಕೆ ತಕ್ಕ ಹಾಗೆ ಬದಲಾಗುತ್ತಿತ್ತೆನೊ. ಆದರೆ ಕನಿಷ್ಠ ಆಂತಹದೊಂದು ಪತ್ರಿಕೆಯ ಆಗತ್ಯವಂತೂ ಇದೆ ಅನ್ನಿಸುತ್ತದೆ.

ಸುಮ್ಮನೆ ಇರಲಿ ಎಂದು ಜನವಾಹಿನಿಯ ಅವಶೇಷಗಳ ಫೋಟೊ ತೆಗೆದುಕೊಂಡೆ. ನಿಮ್ಮ ಗಮನಕ್ಕೂ ಇರಲಿ ಎಂದು ಇದನ್ನು ಅಪ್ ಲೋಡ್ ಮಡಿದ್ದೇನೆ. ನೋಡಿ.....

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

'ಕನಸಿನ ಎಡಿಟರ್'!

ಯುವ ಪತ್ರಕರ್ತನ 'ಕನಸಿನ ಎಡಿಟರ್' ಒಂದು ಸುಳಿವನ್ನೂ ಕೊಡದೆ ಕಣ್ಮರೆಯಾಗಿದ್ದಾರೆ! ಇ. ರಾಘವನ್ ಕೈಗೆ ಆಯುಧ ಕೊಟ್ಟು, ರಣ ಬಿಸಿಲಿನ ಮೈದಾನದ ನಡುವೆ, ಶತ್ರುವನ್ನು ಗುರಿಇಟ್ಟು ತೋರಿಸಿ, ಮರೆಯಲ್ಲಿ ನಿಂತು ಮುಗುಳ್ನುಗುತ್ತಿದ್ದ ಭಾವ ಹಠಾತ್ ಗೊಂದಲಕ್ಕೀಡಾಗಿದೆ. ಒಂದು ವರ್ಷಕ್ಕೂ ಕಡಿಮೆ ಅವಧಿಯ ಒಡನಾಟವನ್ನು ಈ ಹೊತ್ತಿಗೆ ವಿವರಿಸಲು ಪದಗಳು ಸಿಗುತ್ತಿಲ್ಲ. ತೊಟ್ಟು ಕಟ್ಟಿಸಿಕೊಂಡು, ಸುವಾಸನೆ ಬೀರುವ ಮಾಲೆ ರೂಪಹೊಂದಿ, ಮಾರುಕಟ್ಟೆಯ ಬಿಸಿಲಿನಲ್ಲಿ ನೀರು ಚಿಮುಕಿಸಿಕೊಂಡು, ಗಿರಾಕಿಯ ಆಗಮನಕ್ಕಾಗಿ ಕಾಯುತ್ತಿದ್ದ "ಅಕ್ಷರ"ಗಳನ್ನೂ ಗೌರವದಿಂದಲೇ ನೋಡಿಕೊಳ್ಳುತ್ತಿದ್ದ ಸಂಪಾದಕರೊಬ್ಬರ ಕುರಿತು ಮಾತುಗಳಿವು. ಇಷ್ಟೆಲ್ಲಾ ಇಲ್ಯಾಕೆ ಹೇಳಬೇಕಾಗಿದೆ ಎಂದರೆ ನಿನ್ನೆ(ಶನಿವಾರ) ನಂ.1 ಕನ್ನಡ ಪತ್ರಿಕೆಯ ಸಂಪಾದಕ ಎತಿರಾಜನ್ ರಾಘವನ್ ನಮ್ಮನ್ನಗಲಿದ್ದಾರೆ. ಅವರ ಕೆಳಗೆ ಕೆಲಸ ಮಾಡಿದ ಅನುಭವ ಇದೇ ಮೇ.18ಕ್ಕೆ ಒಂದು ವರ್ಷ ತುಂಬುತ್ತದೆ, ಅಷ್ಟೆ! ಅವರು ತೀರಿಕೊಂಡರು ಎಂಬ ಸುದ್ದಿ 'ಸ್ಫೋಟ'ವಾಗುವ ಹೊತ್ತಿಗೆ ನಾನು ಕಚೇರಿಯಲ್ಲಿದ್ದೆ. ಕಳೆದ ನೂರ ಎಪ್ಪತ್ತು ಚಿಲ್ಲರೆ ದಿನಗಳ ಹಿಂದೆ ಶುರುವಾದ 'ಯುವ ಗರ್ಜನೆ' ಎಂಬ ಪರಿಕಲ್ಪನೆಗೆ ದೊಡ್ಡ ಮೈಲಿಗಲ್ಲು ಸಿಕ್ಕ ದಿನ ಅದು. ಪ್ರಾದೇಶಿಕ ಭಾಷೆಯ ಪತ್ರಿಕೆಯೊಂದು ಕಾರ್ಪೋರೇಟ್ ಜಗತ್ತಿನ ವೇದಿಯಲ್ಲಿ ನಿಂತು ತಮ್ಮ ನಿಲುವನ್ನು ತಣ್ಣಗೆ ವಿವರಿಸಿದ ಸಮಯ ಕೂಡ. ಅದರ ವರದಿಗಾ...
ಕಲ್ಲೂರಿ ಎಂಬ ಸಿನಿಮಾ ನೋಡಿದ್ದೀರಾ...? ಪ್ರಶಾಂತ್ ಹುಲ್ಕೋಡು ಸಿನಿಮಾ ಹೇಗಿರಬೇಕು ಎಂದು ನಿರ್ದಿಷ್ಟವಾಗಿ ಹೇಳುವದು ಕಷ್ಟ. ಆದರೆ ಒಳ್ಳೆಯ ಸಿನಿಮಾ ನೋಡುಗನ್ನು ತನ್ನಲ್ಲಿ ಒಂದು ಪಾತ್ರವಾಗಿಸುತ್ತದೆ ಅನ್ನುತ್ತಾರೆ. ಹಾಗಾಗಿಯೆ ಬಾಲಿವುಡ್ ಮಂದಿ ರಿಯಲ್ ಸ್ಟೋರಿಗಳನ್ನು ರೀಲ್‌ನಲ್ಲಿ ತರಲು ಹೆಚ್ಚು ಶ್ರಮವಹಿಸುತ್ತಾರೆ. ಬಾಲಿವುಡ್‌ನಲ್ಲಿಯೂ ಆಂತಹ ಪ್ರಯೋಗಗಳಾಗುತ್ತಿವೆ. ಬದುಕಿಗೆ ಹತ್ತಿರವೆನಿಸುವ ಕತೆಗಳನ್ನು ತೆರೆಗೆ ಅಳವಡಿಸುವುದು ಸುಲಭದ ಕೆಲಸವಲ್ಲ. ಅದಕ್ಕೆ ತನ್ನದೆ ಆದ ಕಮಿಟ್‌ಮೆಂಟ್, ಡೆಡಿಕೇಶನ್ ಇರಬೇಕಾಗುತ್ತದೆ. ಚಿತ್ರದ ನಿರ್ದೇಶಕನಿಗೆ ಅಂತಹ ಸಂವೇದನೆ ಇರದಿದ್ದರೆ ಇಡೀ ಚಿತ್ರ ಹಾಳಾಗಿಬಿಡುತ್ತದೆ. ಈ ಮಾತಿಗೆ ವಿರುದ್ಧವಾಗಿ ಇತ್ತೀಚೆಗೆ ಬಂದ ತಮಿಳಿನ ಕಲ್ಲೂರಿ ಉತ್ತಮ ಉದಾಹರಣೆ. ಈ ಚಿತ್ರದ ಕುರಿತು ಹೇಳುವ ಮುನ್ನ ನಿಮಗೆ ಇದನ್ನು ತೆರೆಗೆ ತಂದ ನಿರ್ದೇಶಕನ ಶ್ರಮದ ಕುರಿತು ಹೇಳಬೇಕು. ಅದು ಕಲ್ಲೂರಿಗಿಂತ ಲೂ ಇಂಟೆರಿಸ್ಟಿಂಗ್. ತಮಿಳಿನ ಪ್ರಸಿದ್ಧ ಚಿತ್ರ ಕಾದಲ್ ನೆನಪಿರಬೇಕು ನಿಮಗೆ. ಅಂತರಜಾತಿ ಪ್ರೇಮ ಕತೆಯನ್ನು ಅದ್ಭುತವಾಗಿ ನಿರೂಪಿಸಿದ ಚಿತ್ರ. ಅದರ ನಿರ್ದೇಶಕ ಬಾಲಾಜಿ ಶಕ್ತಿವೇಲು ಕಾದಲ್ ನಂತರ ನಿರ್ದೇಶಿಸಿದ ಚಿತ್ರವೇ ಕಲ್ಲೂರಿ. ತಮಿಳಿನಲ್ಲಿ ಕಲ್ಲೂರಿ ಎಂದರೆ ಕಾಲೇಜು ಎಂದರ್ಥ. ಕಾದಲ್ ಸೂಪರ್ ಹಿಟ್ ಆದ ನಂತರ ಬಾಲಾಜಿ ಶಕ್ತಿವೇಲು ಮುಂದೆ ನಿರ್ಮಾಪಕರ ದಂಡೇ ನೆರೆದಿತ್ತಂತೆ. ಆದರೆ ಈ ಮಹಾಶಯ ಯಾವುದನ್ನು ಒಪ್ಪಿಕೊಳ್ಳದೆ ಆರ್ಥಿಕ...